ಕಾರ್ಕಳ : ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ.ಒಬ್ಬ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು. ಗುರುವಿಲ್ಲದೆ ಜೀವನಕ್ಕೆ ಯಾವುದೇ ರೀತಿ ಅರ್ಥವಿರುವುದಿಲ್ಲ ಅಜ್ಞಾನವೆಂಬ ಕತ್ತಲೆಯಿಂದ ಜ್ಞಾನವೆಂಬ ಬೆಳಕಿಗೆ ಒಯ್ಯುವ ಮಹಾಶಕ್ತಿಯೇ ಗುರು.
ಗುರುಗಳ ಗೌರವಾರ್ಥವಾಗಿ ಆಷಾಢ ಶುಕ್ಲ ಪೂರ್ಣಿಮೆ ಯಂದು *ಗುರುಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಈ ದಿನದಂದು ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಭಜನೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಮತ್ತು ಸಂಜೆ ಉಪಹಾರದ ವ್ಯವಸ್ಥೆ ಮತ್ತು ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ವ್ಯವಸ್ಥೆ ಇದೆ ಎಂದು ಕಾರ್ಕಳ ಕಮಲಾಕ್ಷ ಕಾಮತ್ ತಿಳಿಸಿದ್ದಾರೆ.