ಎಸ್‌ಸಿಎಸ್‌ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

0
12

ಮಂಗಳೂರು : ಎಸ್‌ ಸಿ ಎಸ್‌ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಕ್ಷೇಮ ಪಾಲನ ಮಂಡಳಿಯ ವತಿಯಿಂದ ಬುಧವಾರ ಕಾಲೇಜಿನ ಉಪನ್ಯಾಸ ಕೊಠಡಿ–04ರಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಮಕ್ಕಳ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದ ಮುಂಚೂಣಿ ಸಾಧಕಿ ಸಾವಿತ್ರಿ ಎಸ್. ರಾವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಹರ್ಷಿ ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜ್ಞಾನದೀಪ ಬೆಳಗಿಸಿದರು.

ಮುಖ್ಯ ಅತಿಥಿಗಳು ಮಾತನಾಡಿ, ಶಿಕ್ಷಕರು ಹಾಗೂ ಪೋಷಕರಿಗೆ ಗೌರವ ಸಲ್ಲಿಸುವ ಸಂಸ್ಕಾರವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಬೆಳೆಸಿಕೊಳ್ಳಬೇಕು ಎಂದರು. ವಿದ್ಯೆ, ವಿನಯ ಮತ್ತು ವಿಧೇಯತೆ ಎಂಬ ಮೂರು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಹತ್ತು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.ಸಾವಿತ್ರಿ ಎಸ್ ರಾವ್ ಅವರ ಸಾಧನೆಯನ್ನು ಗುರುತಿಸಿ ಅವರಿಗೆ ಸಂಸ್ಥೆಯ ವತಿಯಿಂದ ಅಭಿನಂದನಾ ಸನ್ಮಾನವನ್ನು ಪ್ರಾಂಶುಪಾಲರು ಮತ್ತು ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ನೀಡಿದರು.

ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಜೀವನದಲ್ಲಿ ಜ್ಞಾನ, ವಿನಯ ಹಾಗೂ ಶಿಸ್ತಿನ ಮೌಲ್ಯಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿ ಕ್ಷೇಮಪಾಲನ ಮಾರ್ಗದರ್ಶಕರಾದ ಮಧುಮತಿ ಜೆ. ರಾಜ ಅವರು ಗುರು ಪೂರ್ಣಿಮೆಯ ಮಹತ್ವವನ್ನು ವಿವರಿಸಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಅವರು ಪುರಂದರದಾಸರ ಕೀರ್ತನೆಯನ್ನು ಹಾಡುವ ಮೂಲಕ ಗುರು ವಂದನೆ ಸಲ್ಲಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಚಿತ್ರಾ ಪಿ. ಶೆಟ್ಟಿ ಅವರು ಮುಖ್ಯ ಅತಿಥಿಯನ್ನು ಪರಿಚಯಿಸುದರ ಮೂಲಕ ಮಕ್ಕಳ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಅಮೂಲ್ಯ ಕೊಡುಗೆಯನ್ನು ವಿವರಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಮಾರ್ಗದರ್ಶಕರಾದ ತಿಲಕ್ ಗೌಡ ಉಪಸ್ಥಿತರಿದ್ದರು.

ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ರೀಶಲ್ ಡಿಸೋಜಾ ಸ್ವಾಗತಿಸಿದರು. ದ್ವಿತೀಯ ಬಿ.ಬಿ.ಎ ಶಶಾಂಕ್ ಎಸ್. ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಪೂರ್ವಾ ನಿರೂಪಿಸಿದರು. ಸುಮಾರು 70 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.