ಬನ್ನಂಜೆಯಲ್ಲಿ ಗುರು ಸಂದೇಶ ಜಾಥಾ: ಆ. 24ರಂದು ಆಮಂತ್ರಣ ಪತ್ರಿಕೆ ಬಿಡುಗಡೆ

0
70

ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಉಡುಪಿ ಇದರ ವತಿಯಿಂದ ಶ್ರೀ ನಾರಾಯಣ ಗುರು ಸ್ವಾಮಿಯವರ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಬಿಲ್ಲವರ ಸೇವಾ ಬನ್ನಂಜೆಯಲ್ಲಿ ನಡೆಯುವ ಗುರು ಸಂದೇಶ ಜಾಥಾದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಆ. ೨೪ರಂದು ಸಂಜೆ ೩-೩೦ಕ್ಕೆ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಸಮಾಜ ಭಾಂದವರು, ಗುರುಗಳ ಅನುಯಾಯಿಗಳು, ಹಿತೈಷಿಗಳು ಹಾಗೂ ಸಮಾಜದ ವಿವಿಧ ಸಂಘಟನೆಗಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವೇದಿಕೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here