ಮಂಗಳೂರಿನಲ್ಲಿ ಗುರುವಂದನೆ ಕಾರ್ಯಕ್ರಮ

0
4

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಮಂಗಳೂರು ಇದರ ಸಹಯೋಗದಲ್ಲಿ ಜುಲೈ 25 ರಂದು ಗುರುವಂದನಾ ಕಾರ್ಯಕ್ರಮ ಹಾಗೂ ಸೇವಾ ನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಗೌರವಾರ್ಪಣೆ ಕಾರ್ಯಕ್ರಮ ವು ಶ್ರೀಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಮಂಗಳೂರು ಇಲ್ಲಿನ ಸಭಾಂಗಣದಲ್ಲಿ ಸಂಪನ್ನಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಸಂದೀಪ್ ಬೂದಿಹಾಳ ಉದ್ಘಾಟಿಸಿ ಗುರು ಶಿಷ್ಯ ಪರಂಪರೆಯ ಮಹತ್ವದ ಕುರಿತು ಮಾತಾಡಿದರು.

ಕೆ ಆರ್ ಎಂ ಎಸ್ ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಗಳು ಡಾ.ಮಾಧವ ಎಂ.ಕೆ ಪ್ರಸ್ತಾವಿಕ ನುಡಿಗಳನ್ನಾಡಿದರು. ಗುರುವಂದನಾ ಕಾರ್ಯಕ್ರಮದಲ್ಲಿ ಭಾರತೀಯ ಜ್ಞಾನ ಪರಂಪರೆ ಕುರಿತು ನಾಡಿನ ಪ್ರಖ್ಯಾತ ಚಿಂತಕ, ವಾಗ್ಮಿ ಡಾ. ರವೀಂದ್ರ ಇವರು ಇಂದಿನ ಯುವ ಸಮುದಾಯಕ್ಕೆ ಭಾರತೀಯ ಜ್ಞಾನ ಪರಂಪರೆಯ ಮಹತ್ವ ಹಾಗೂ ಇಂದಿನ ಅಧ್ಯಾಪಕರ ಜವಾಬ್ದಾರಿಗಳ ಕುರಿತು ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಭಾರತೀಯ ಜ್ಞಾನ ಪರಂಪರೆಯ ಕುರಿತು ಸಂಶೋಧನೆ ನಡೆಯಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಮಂಗಳೂರು ಇಲ್ಲಿನ ಪ್ರಾಂಶುಪಾಲ ಡಾ. ಭಾನುಪ್ರಕಾಶ್ ಬಿ.ಇ ಉಪಸ್ಥಿತರಿದ್ದು, ಶಿಕ್ಷಕ ವೃತ್ತಿಯ ಶ್ರೇಷ್ಠತೆಯ ಕುರಿತು ಮಾತಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಹೊಂದಿದ ಅಧ್ಯಾಪಕರುಗಳಾದ ಕೆ ಎಸ್ ಹೆಗ್ಡೆ ಕಾಲೇಜಿನ ದಿನೇಶ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯದ ಪ್ರೊ ವಿಶಾಲಾಕ್ಷಿ,ವಿಜಯಾ ಕಾಲೇಜಿನ ವೆಂಕಟೇಶ್ ಭಟ್, ಎಸ್ ಡಿ ಎಂ ಕಾಲೇಜಿನ ಪ್ರೊ ಅರುಣಾ ಪಿ ಕಾಮತ್, ಬೆಳಂದೂರು ಕಾಲೇಜಿನ ಶಂಕರ್ ಭಟ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರು ಡಾ.ಸುಧಾ ಯುವಕ ಸ್ವಾಗತಿಸಿದರು. ಶ್ರುತಿ.ಎನ್ ವಂದಿಸಿದರು ಗೀತಾ ಜೈನ್, ಕಾಜಲ್ ಶ್ರುತಿ ಎನ್ ಕಾರ್ಯಕ್ರಮ ಸಂಯೋಜಿಸಿ ಕಾಜಲ್ ಕಾರ್ಯಕ್ರಮ ನಿರೂಪಿಸಿದರು.

ವರದಿ ರಾಯಿ ರಾಜ ಕುಮಾರ್