ಇದೆ ತಿಂಗಳ ಡಿ : 28 ರಂದು ರವೀಂದ್ರ ಕಲಾಕ್ಷೇತ್ರ ನಯನ ಸಭಾಂಗಣ. ಕನ್ನಡ ಭವನ ಬೆಂಗಳೂರು ಇಲ್ಲಿ ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ (ರಿ) ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ವತಿಯಿಂದ ವಿಶ್ವಮಾನವ ದಿನಾಚರಣೆ ಹಾಗೂ ಮೂರು ವರ್ಷ ಪೂರ್ಣಗೊಳಿಸಿದ ಅನ್ನಪೂರ್ಣೇಶ್ವರಿ ಫೌಂಡೇಶನ್ ಸ್ಥಾಪಕ ದಿನೋತ್ಸವ ಮತ್ತು ರಾಜ್ಯಮಟ್ಟದ ” ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು , ಈ ಮೇಲಿನ ಪ್ರಶಸ್ತಿಗೆ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ, ಸಾಮಾಜಿಕ ಚಿಂತಕಿ, ಸಾಹಿತಿ, ಪತ್ರಕರ್ತೆ ಹಾಗೂ ಸಂಸ್ಥಾಪಕ ಅಧ್ಯಕ್ಷರು ‘ ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ’ ಬಹುಮುಖ ಪ್ರತಿಭೆ, ಸದಾ ಕ್ರಿಯಾಶೀಲರಾಗಿರುವ ಹಾಗೂ ಜಿಲ್ಲೆ, ರಾಜ್ಯ,ಮಟ್ಟದಲ್ಲಿ ಹಲವಾರು ಸಂಘ ಸಂಸ್ಥೆಯಲ್ಲಿ ಪದಾಧಿಕಾರವನ್ನು ಪಡೆದು ಕಾರ್ಯನಿರ್ವಹಿಸುತ್ತಿರುವ, ನೂರಾರು ಪ್ರಶಸ್ತಿಗಳನ್ನು ಪಡೆದಿರುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದು ಗುರುತಿಸಿಕೊಂಡಿರುವ ಮಹಿಳಾ ಸಾಧಕಿಯಾದ, ಮಹಿಳಾ ಹೋರಾಟಗಾರ್ತಿಯಾದ, ಕನ್ನಡ ಪರ ಹೋರಾಟಗಾರ್ತಿಯಾದ,ಸಮಾಜ ಸೇವಕಿ, ಸಂಘಟಕಿ, ಸಾಮಾಜಿಕ,ಸಾಂಸ್ಕೃತಿಕ, ಶೈಕ್ಷಣಿಕ, ಸಾಹಿತಿಕವಾಗಿ ಸೇವೆ ಸಲ್ಲಿಸಿರುವ ಹಾಗೂ ಹಲವಾರು ಪ್ರಕಾರಗಳಲ್ಲಿ 12 ಕ್ಕೂ ಹೆಚ್ಚು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಹಲವು ಕೃತಿ ಬಿಡುಗಡೆಗೆ ಸಿದ್ಧವಾಗುತ್ತಿದ್ದು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಹಾಗೂ ಗಾಯಕಿ,ಅಂಕಣಗಾರ್ತಿ, ಹಲವಾರು ಪ್ರಕಾರಗಳಲ್ಲಿ ಪತ್ರಿಕೆಗಳಿಗೆ ಬರೆಯುತ್ತಿರುವ ಹೆಚ್. ಎಸ್. ಪ್ರತಿಮಾ ಹಾಸನ್ ರವರನ್ನು ಶಿಕ್ಷಣ ಕ್ಷೇತ್ರಕ್ಕೆ ಆಯ್ಕೆ ಮಾಡಿ ಪ್ರತಿಷ್ಠಿತವಾದ ” ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ‘ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಶ್ರೀಮತಿ ನಿತ್ಯ ಎಂ ಆಚಾರ್ ಅಧ್ಯಕ್ಷರು ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಇವರಿಗೆ ಗಣೇಶ್ ಕಾಸರಗೋಡು ಹಿರಿಯ ಪತ್ರಕರ್ತರು, ಹಾಗೂ ಹೆಚ್. ಎಸ್. ಮಂಜುನಾಥ್ ( ಆರೋಗ್ಯ ನಿರೀಕ್ಷಣಾಧಿಕಾರಿಗಳು ) ತಾಯಿ ನೀಲಮ್ಮ ಸುರೇಶ್. ಹಾಗೂ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಉದಯ್ ಕುಮಾರ್, ಕುಟುಂಬಸ್ಥರು, ಪತ್ರಿಕಾ ಬಳಗದವರು, ಸಂಘ-ಸಂಸ್ಥೆಯವರು,ಹೋರಾಟಗಾರರು, ಹಿರಿಯ ಮತ್ತು ಕಿರಿಯ ಸಾಹಿತಿಗಳು ಸಮಾಜ ಸೇವಕರು ಇನ್ನೂ ಹಲವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

