Saturday, June 14, 2025
HomeUncategorizedಹಳೆಯಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ ವಿಜ್ಞಾನದಲ್ಲಿ ಸುಸ್ಥಿರತೆ ಬಗ್ಗೆ ರಾಷ್ಟ್ರೀಯ ಸಮ್ಮೇಳನ

ಹಳೆಯಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ ವಿಜ್ಞಾನದಲ್ಲಿ ಸುಸ್ಥಿರತೆ ಬಗ್ಗೆ ರಾಷ್ಟ್ರೀಯ ಸಮ್ಮೇಳನ

ಕ್ರೀಡಾ ಲೋಕವು ಕೇವಲ ಮನರಂಜನೆಗೆ ಸೀಮಿತವಾಗಿರದೆ ಅದು ಒಂದು ಅದ್ಭುತ ಅಧ್ಯಯನ ಕ್ಷೇತ್ರವಾಗಿದ್ದು, ವೈಜ್ಞಾನಿಕ ಸಂಶೋಧನೆಗೆ ವಿಪುಲ ಅವಕಾಶವನ್ನು ನೀಡುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಬಳಸುವಂತಹ ತಂತ್ರಜ್ಞಾನಗಳು ಸಂಶೋಧನಾ ಅವಕಾಶವನ್ನು ಇನ್ನಷ್ಟು ಹೆಚ್ಚಿಸಿವೆ ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಶಿಕ್ ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕರು ಮತ್ತು ಅಧ್ಯಕ್ಷರು ಡಾಕ್ಟರ್ ಕಿಶೋರ್ ಕುಮಾರ್ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಳೆಯಂಗಡಿ ಇಲ್ಲಿ ದೈಹಿಕ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿ ನಡೆದ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು
ಕ್ರೀಡಾ ಚಟುವಟಿಕೆಗಳ ಸಮಯದಲ್ಲಿ ಉತ್ಪತ್ತಿಯಾಗುವ ಏಕ-ಬಳಕೆಯ ಪ್ಲಾಸ್ಟಿಕ್ ಮತ್ತು ತಿರಸ್ಕರಿಸಿದ ಕ್ರೀಡಾ ಸಾಧನಗಳಿಂದ ಹಿಡಿದು, ಪ್ಯಾಕೇಜ್ ಆಹಾರ ಬಳಕೆ ಮತ್ತು ಕ್ರೀಡಾ ಸೌಲಭ್ಯ ಕಲ್ಪಿಸುವುದಕ್ಕೆ ಸಂಬಂಧಿಸಿದ ತ್ಯಾಜ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಈ ಬೆಳವಣಿಗೆಗಳು
ಕ್ರೀಡಾ ವಿಜ್ಞಾನದೊಳಗಿನ ಸುಸ್ಥಿರತೆಗೆ ಸವಾಲುಗಳಾಗಿದ್ದು ಸವಲಾಗಿದ್ದು ಜವಾಬ್ದಾರಿಯುತ ಕ್ರೀಡಾ ಜಗತ್ತನ್ನು ರಚಿಸುವ ಪ್ರಯತ್ನಗಳನ್ನು ದುರ್ಬಲಗೊಳಿಸುತ್ತದೆ. ಈ ಬಗ್ಗೆ ಕ್ರೀಡಾ ಸುಸ್ಥಿರತೆಯ ದೃಷ್ಟಿಯಿಂದ ಹೆಚ್ಚಿನ ಜಾಗೃತಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕಿರಣ್ ಎಂ ಅವರು ವಹಿಸಿದ್ದರು. ಕೇರಳದ ಕಣ್ಣೂರ್ ವಿಶ್ವವಿದ್ಯಾನಿಲಯದ ಡಾ ಅನಿಲ್ ರಾಮಚಂದ್ರನ್ ದಿಕ್ಸೂಚಿ ಭಾಷಣ ಮಾಡಿದರು. ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ. ಜಾನ್ ಪಿಂಟೋ ಸ್ವಾಗತಿಸಿದರು. ಕಾಲೇಜಿನ ವಾಣಿಜ್ಯಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಜಯ ವಂದಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಯೋಜಕರಾದ ಡಾ. ಲೋಕೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ್ದು ಸಹಾಯಕ ಪ್ರಾಧ್ಯಾಪಕರಾದ ಜಯಶ್ರೀ ಕದ್ರಿ ಮತ್ತು ಫೆಲಿಟ ಮೋನಿಸ್ ಅವರು ನಿರ್ವಹಿಸಿದರು. ಸುಮಾರು 90 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಮತ್ತು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಷಪ್ಪ ಗೌಡ ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular