ಹಳೆಯಂಗಡಿ: ವಿವಿಧ ಸಂಘಟನೆಗಳು, ಸಂಸ್ಥೆಗಳ ಸಹಭಾಗಿತ್ವದಲ್ಲಿ ಆ.25ರಂದು ಹಳೆಯಂಗಡಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ದಂತ ತಪಾಸಣೆ, ಚಿಕಿತ್ಸಾ ಶಿಬಿರ ನಡೆಯಲಿದೆ. ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ.) ತೋಕೂರು, ಹಳೆಯಂಗಡಿ ಮತ್ತು ಪೂಜಾ ಫ್ರೆಂಡ್ಸ್, ಹಳೆಯಂಗಡಿ, ಆಟೊ ರಿಕ್ಷಾ ಚಾಲಕರ ಮಾಲಕರ ಸಂಘ (ರಿ.) ಹಳೆಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ ಇದರ ಸಹಕಾರದಲ್ಲಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರುಗಳ ಸಹಕಾರದೊಂದಿಗೆ ಈ ಉಚಿತ ವೈದ್ಯಕೀಯ ಮತ್ತು ದಂತ ತಪಾಸಣೆ, ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.