Sunday, July 21, 2024
Homeಅಪರಾಧಸುಟ್ಟು ಕರಕಲಾದ ಕಾರಿನಲ್ಲಿ ಮೂವರ ಅರೆಬೆಂದ ಮೃತದೇಹ ಪತ್ತೆ

ಸುಟ್ಟು ಕರಕಲಾದ ಕಾರಿನಲ್ಲಿ ಮೂವರ ಅರೆಬೆಂದ ಮೃತದೇಹ ಪತ್ತೆ

ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಾರಿನಲ್ಲಿದ್ದ ಮೂರು ಶವಗಳು‌ ಪತ್ತೆಯಾಗಿದ್ದು ಗುರುತು ಸಹ ಪತ್ತೆಯಾಗಿದೆ‌.‌ ಸದ್ಯ ಪ್ರಕರಣದ ರಹಸ್ಯ ಬಯಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ತುಮಕೂರಿಗೆ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56), ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು. ಆದರೆ ಬಳಿಕ ಸುಟ್ಟ ಕಾರಿನಲ್ಲಿ ಇವರ ಮೃತದೇಹ ಪತ್ತೆಯಾಗಿತ್ತು.

ಮೃತ ಮೂವರು “ನಕಲಿ ಚಿನ್ನದ ದಂಧೆ”ಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ಈ ಪ್ರಕರಣ ಪ್ರಮುಖ ಆರೋಪಿ ತುಮಕೂರಿನ ಸ್ವಾಮಿ ಸೇರಿ ಆರು ಮಂದಿಯನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳು, ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಬೆಲೆಗೆ ಬಂಗಾರ ಮಾರಾಟ ಮಾಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಅವರಲ್ಲಿದ್ದ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಆರು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular