ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬದಕೋಣೆಯಲ್ಲಿ ಕೊಡುಗೆಯಾಗಿ ನೀಡಲ್ಪಟ್ಟ ಸ್ಕೂಲ್ ಬಸ್ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಶಾಲಾ ಹಳೆ ವಿದ್ಯಾರ್ಥಿ, ದಾನಿಗಳು ಮತ್ತು ಉದ್ಯಮಿಗಳಾದ ಶ್ರೀ ಹೆಚ್ ಜಯಶೀಲ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ತಾನು ಕಲಿತ ಶಾಲೆಯ ದೂರ ದೂರದ ಮಕ್ಕಳಿಗೆ ಶಾಲೆಗೆ ಬರಲು ಅನುಕೂಲವಾಗಬೇಕೆಂಬ ಉದ್ದೇಶದಿಂದ ಈ ಬಸ್ ಶಾಲೆಗೆ ಕೊಡುಗೆಯಾಗಿ ನೀಡಿದ್ದೇನೆ, ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿ ಶುಭ ಹಾರೈಸಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ರಾಧಾ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಖಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಾಗಮ್ಮ ದೇವಾಡಿಗ ಮುಖ್ಯ ಅತಿಥಿಯಾಗಿದ್ದರು. ಮಾಜಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ರಾಜೇಶ ದೇವಾಡಿಗ, ಶ್ರೀಮತಿ ಶಾರದಾ ದೇವಾಡಿಗ, ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಣ್ಣಪ್ಪ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುರುರಾಜ ಹೆಬ್ಬಾರ್, ಗೌರವಾಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ, ಉದ್ಯಮಿ ಶ್ರೀ ಜಯಶೀಲ ಶೆಟ್ಟಿ, ಮಂಜುನಾಥ ಕಾರಂತ್ ಹೊಳೆ ಬಾಗಿಲು,
ಎಸ್ ಡಿ ಎಂ ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರಾದ ಮಹಾಬಲ.ಕೆ ಸ್ವಾಗತಿಸಿದರು . ಅಕ್ಷತಾ ಎಂ ಶೆಟ್ಟಿ ವಂದಿಸಿದರು.ನಾಗ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು