ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸುಮಂಗಲಾ ಸಭಾಂಗಣದಲ್ಲಿ ಮಂಗಳೂರು ವಿಶ್ವ ಗಾಣಿಗರ ಚಾವಡಿ ಮತ್ತು ಮುಂಬೈ ಶ್ರೀನಿವಾಸ್ ಫೌಂಡೇಶನ್ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ
‘ಗೇನದ ತುಡರ್ ನಿಧಿ’ ಶೈಕ್ಷಣಿಕ ನೆರವು ಹಸ್ತಾಂತರ ಭಾನುವಾರ ನಡೆಯಿತು. ಫೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಪಿ.ಸಪಲ್ಯ ರಾಯಿ, ಗಾಣಿಗರ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ, ಸುಮಂಗಲಾ ಕ್ರೆಡಿಟ್ ಸೊಸೈಇ ಅಧ್ಯಕ್ಷ ನಾಗೇಶ ಕಲ್ಲಡ್ಕ, ವಿಜಿಸಿ ಅಧ್ಯಕ್ಷ ಹರಿಪ್ರಸಾದ್ ಶಕ್ತಿನಗರ ಮತ್ತಿತರರು ಇದ್ದರು.