ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಬಂಟ್ವಾಳ ಇದರ ಪಾಣೆಮಂಗಳೂರು ವಲಯದ ಬೊಂಡಾಲ ಹಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ಅನುದಾನ ರೂಪಾಯಿ 150000/-ದ ಮಂಜುರಾತಿ ಪತ್ರವನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ ಎಚ್ ರವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ದಯಾನಂದ ಪಿ, ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಶಿವ ಲಕ್ಷ್ಮಿ, ವಿವೇಕಾನಂದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನೋದ್ ಶೆಟ್ಟಿ,ಒಕ್ಕೂಟ ಸೇವಾ ಪ್ರತಿನಿಧಿ ಸುಲೋಚನಾ, ಒಕ್ಕೂಟ ಅಧ್ಯಕ್ಷೆ ವಸಂತಿ ಗಂಗಾಧರ್, ಶಾಲಾ ಶಿಕ್ಷಕಿರಾದ ಸೌಮ್ಯ,ಲಾವಣ್ಯ ಉಪಸ್ಥಿತರಿದ್ದರು.