ವಿಟ್ಲ : ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತ ಬೆಟ್ಟು ಇಲ್ಲಿ ಶಾಲಾ ಶೌಚಾಲಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 75,000/- ಮೊತ್ತ ಅನುದಾನ ಮಂಜೂರಾಗಿದ್ದು ಸದರಿ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಚನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದೀಕ್ , ಮುಖ್ಯ ಶಿಕ್ಷಕಿ ನಳಿನಾಕ್ಷಿ, ಶಿಕ್ಷಕರಾದ ಉದಯಕುಮಾರ್ ಕೆ ಹಾಗೂ ಸವಿತಾ.ಎ ಉಪಸ್ಥಿತರಿದ್ದರು