ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿಯಾದ ಸಾರ್ಜೆಂಟ್ ಸುನಿಲ್ ಕುಮಾರ್, ಮೆಟಲ್ ನಂ. 02 ಮಂಗಳೂರು ಘಟಕ ಇವರು ರಾಜೀನಾಮೆ ನೀಡಿದ್ದು, ಉಳ್ಳಾಲ ಘಟಕದ ಗೃಹರಕ್ಷಕ ಸುನಿಲ್, ಮೆ.ನಂ. 822 ಇವರಿಗೆ ಆ.21 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ನೇಮಿಸಿ ಜಿಲ್ಲಾ ಕಛೇರಿಯಿಂದ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕದಳದ ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ., ಮತ್ತು ಉಳ್ಳಾಲ ಘಟಕದ ಮಾಜಿ ಪ್ರಭಾರ ಘಟಕಾಧಿಕಾರಿ ಸುನಿಲ್ ಕುಮಾರ್ ಉಪಸ್ಥಿತರಿದ್ದರು.