ಮಂತ್ರಾಲಯ : ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರಿಗೆ ಫೆ 25ರಂದು ಶ್ರೀಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಗಣ್ಯ ಅತಿಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

