Saturday, July 20, 2024
Homeಧಾರ್ಮಿಕಮಾ.27ರಂದು ಹರ್ಕೂರು ಶ್ರೀ ಮಹಾಗಣಪತಿ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಮಾ.27ರಂದು ಹರ್ಕೂರು ಶ್ರೀ ಮಹಾಗಣಪತಿ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಮರವಂತೆ: ಕುಂದಾಪುರ ತಾಲೂಕಿನ ಹರ್ಕೂರು ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಶಿಲಾದೇಗುಲ ಸಮರ್ಪಣೆ, ಬ್ರಹ್ಮಕಲಶೋತ್ಸವ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾ.26ರಿಂದ 28ರವರೆಗೆ ನಡೆಯಲಿದೆ. ಹರ್ಕೂರು ಶ್ರೀ ಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಮಾ.25 ರಂದು ಶ್ರೀದೇವರ ಬೆಳ್ಳಿ ಪ್ರಭಾವಳಿ ವೈಭವದ ಮೆರವಣಿಗೆ ಜರಗಿತು. ಮಾ.26ರಂದು ಶ್ರೀ ಗಣಪತಿ ದೇವರ ಪುನರ್ ಪ್ರತಿಷ್ಠೆ ಹಾಗೂ ಶಿಲಾಮಯದೇಗುಲ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮ ಗಳು ಜರುಗಲಿದೆ. ಮಾ.27ರಂದು ಬೆಳಗ್ಗೆ 8 ಗಂಟೆಗೆ ಪೀಠ ಪ್ರತಿಷ್ಠೆ ಸಹಿತ ಇನ್ನಿತರ ಧಾರ್ಮಿಕ ಕಾರ್ಯಗಳೊಂದಿಗೆ ಆರಂಭಗೊಂಡು, 10.35ಕ್ಕೆ ನಡೆಯುವ ವೃಷಭ ಲಗ್ನ ಸುಮುಹೂರ್ತದಲ್ಲಿ ಶ್ರೀಮಹಾಗಣಪತಿ ದೇವರ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಜರುಗಲಿದೆ. ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಮಾ.28 ರಂದು ಶ್ರೀದೇವರ ಬ್ರಹ್ಮಕಲಶಾಭಿಷೇಕ ಜರುಗಲಿದೆ. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ.

RELATED ARTICLES
- Advertisment -
Google search engine

Most Popular