ಬೈಂದೂರು:ತಾಲೂಕಿನ ಹರ್ಕೂರು ಗ್ರಾಮದ ಶ್ರೀಮಹಾಗಣಪತಿ ದೇವಸ್ಥಾನದ ತಾಮ್ರದ ಹೊದಿಕೆಯ ನೂತನ ಶಿಲಾದೇಗುಲ ಸಮರ್ಪಣೆ, ಬ್ರಹ್ಮಕಲಶೋತ್ಸವ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಶ್ರೀಗಣಪತಿ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ಕಿರೀಟ ಮತ್ತು ಬೆಳ್ಳಿ ಪ್ರಭಾವಳಿಯನ್ನು ಚಂಡೆವಾದನ, ಪೂರ್ಣಕುಂಭ ಸ್ವಾಗತದೊಂದಿಗೆ ಭವ್ಯ ಮೆರವಣಿಗೆ ಮೂಲಕ ಸೋಮವಾರ ಬರಮಾಡಿಕೊಳ್ಳಲಾಯಿತು.
ಹರ್ಕೂರು ಶ್ರೀಚಾಮುಂಡೇಶ್ವರಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಹರ್ಕೂರು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು. ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬೆಳ್ಳಿ ಪ್ರಭಾವಳಿಗೆ ಪೂಜೆಯನ್ನು ಸಲ್ಲಿಸಲಾಯಿತು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಉದ್ಯಮಿಗಳು ಘಟಪ್ರಭಾ ಎಚ್.ಜಯಶೀಲ ಎನ್ ಶೆಟ್ಟಿ ಅವರು ಮಾತನಾಡಿ, ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಮತ್ತು ನೂತನ ಶಿಲಾದೇಗುಲದ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ಪ್ರಭಾವಳಿ ಮತ್ತು ಮುಖವಾಡವನ್ನು ಭವ್ಯ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಗಿದೆ ಎಂದರು. ಸತತ ಮೂರು ದಿನಗಳ ನಡೆಯುವ ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಗೌರವ ಸಲಹೆಗಾರರಾದ ಕೃಷ್ಣಪ್ರಸಾದ ಅಡ್ಯಂತಾಯ ಅವರು ಮಾತನಾಡಿ, ಬಹಳ ಪುರಾತನವಾದ ಅಜೀರ್ಣಾವಸ್ಥೆಯಲ್ಲಿದ್ದ ದೇವಾಲಯವನ್ನು ಹರ್ಕೂರು ಮನೆಯವರು ಹಾಗೂ ಗ್ರಾಮಸ್ಥರೆಲ್ಲ ಕೂಡಿಕೊಂಡು ಭವ್ಯವಾದ ಶಿಲಾದೇಗುಲ ತ್ರಾಮದ ಹೋದಿಕೆಯೊಂದಿಗೆ ನಿರ್ಮಿಸಲಾಗಿದೆ. ಇವೊಂದು ದೇವತಾ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರೂ ಶ್ರೀಮಹಾಗಣಪತಿ ದೇವರು ಒಳಿತನ್ನು ಮಾಡಲಿ ಎಂದರು. ಇವೊಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಕಾರ್ಯಾಧ್ಯಕ್ಷರಾದ ಮಂಜಯ್ಯ ಶೆಟ್ಟಿ ಹರ್ಕೂರು ಅವರು ಮಾತನಾಡಿ, ಶ್ರೀಮಹಾಗಣಪತಿ ದೇವರ ಪ್ರತಿಷ್ಠಾಪನಾ ಕಾರ್ಯದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಥಮ ಪೂಜಿತ ಗಣಪತಿ ದೇವರ ಕೃಪೆಗೆ ಎಲ್ಲರೂ ಪಾತ್ರರಾಗಬೇಕೆಂದರು.
ದೇವಸ್ಥಾನದ ಗೌರವಾಧ್ಯಕ್ಷರಾದ ಚಿತ್ತರಂಜನ್ ಹೆಗ್ಡೆ ಮಾತನಾಡಿ,300ಕ್ಕೂ ಅಧಿಕ ವರ್ಷಗಳ ಇತಿಹಾಸವನ್ನು ಹೊಂದಿರುವ ಅಜೀರ್ಣಾವಸ್ಥೆಯಲ್ಲಿದ್ದ ಶ್ರೀಮಹಾಗಣಪತಿ ದೇವರ ದೇವಸ್ಥಾನವನ್ನು ಅತ್ಯಂತ ವ್ಯವಸ್ಥಿತವಾದ ರೀತಿಯಲ್ಲಿ ಕಟ್ಟಲಾಗಿದೆ. ಶ್ರೀದೇವರ ಪುನರ್ ಪ್ರತಿಷ್ಠೆ ಹಾಗೂ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಮಂಗಳವಾರದಿಂದ ಆರಂಭಗೊಂಡು ಗುರುವಾರದ ತನಕ ನಿರಂತರವಾಗಿ ನಡೆಯಲಿದೆ ಎಂದರು. ಇವೊಂದು ದೇವತಾ ಕಾರ್ಯದಲ್ಲಿ ಊರಪರವೂರ ಭಕ್ತರು ಭಾಗವಹಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಅರ್ಚಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹರ್ಕೂರು ಶ್ರೀಮಹಾಗಣಪತಿ ದೇವರ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಮತ್ತು ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮಾಚ್.26 ರ ಮಂಗಳವಾರದಿಂದ ಮಾರ್ಚ್ 28 ಗುರುವಾರದ ವರಗೆ ನಡೆಯಲಿದೆ.