ಹಾಸನ ದುರಂತ ಹೃದಯ ವಿದ್ರಾವಕ ಘಟನೆ, ಪ್ರಧಾನಿ ಮೋದಿ ಸಂತಾಪ; ಪರಿಹಾರ ಘೋಷಣೆ

0
24

ಹಾಸನ: ಮೊಸಳೆಹೊಸಹಳ್ಳಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಸಂಭವಿಸಿದೆ. ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಪರಿಹಾರ ಘೋಷಣೆ ಮಾಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

ಮೃತರ ಪ್ರತಿ ಕುಟುಂಬಕ್ಕೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here