ಬೈಕ್ ಮತ್ತು ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ

0
44

ಪುತ್ತೂರು : ಕಾವೇರಿಕಟ್ಟೆ ಸಮೀಪ ಬೈಕ್ ಹಾಗೂ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.

ಅಪಘಾತದ ಪರಿಣಾಮ ಬೈಕ್ ಹಾಗೂ ಹಣ ಸಾಗಣೆ ವಾಹನ ಎರಡಕ್ಕೂ ಹಾನಿಯಾಗಿದೆ. ಬೈಕ್ ಸವಾರ ಅಪಘಾತದಲ್ಲಿ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಿತ ಅಧಿಕಾರಿಗಳು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.