ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರದಲ್ಲಿ ಆರೋಗ್ಯ ಮಾಹಿತಿ

0
98

ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲ್ , ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ಮತ್ತು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ, ಇವರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರದಲ್ಲಿ ಆರೋಗ್ಯದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಕ್ಕಳ ಆರೋಗ್ಯ ತಪಾಸಣೆ ನಡೆಯಿತು. ಮುಖ್ಯವಾಗಿ ಮಕ್ಕಳ ತೂಕ, ರಕ್ತ ಪರೀಕ್ಷೆ ಮಾಡಲಾಯಿತು. ಶೀತ, ಜ್ವರ, ಕೆಮ್ಮು ಆರೋಗ್ಯ ಸಮಸ್ಯೆವಿರುವ ಮಕ್ಕಳಿಗೆ ಔಷಧಿ ನೀಡಿದರು. ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮಕ್ಕಳಿಗೆ ಸಲಹೆ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಯಾದ ಡಾ. ಸುಬ್ರಹ್ಮಣ್ಯ ಪ್ರಭುರವರು ವೈಯಕ್ತಿಕ ಸ್ವಚ್ಛತೆ, ಸಾಂಕ್ರಮಿಕ ರೋಗಗಳ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಹೇಳಿದರು. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆವಿರುವ ಮಕ್ಕಳಿಗೆ ಔಷಧಿ ನೀಡಿದರು ಮತ್ತು ಆರೋಗ್ಯದ ಕಾಳಜಿ ವಹಿಸುವಂತೆ ಮಕ್ಕಳಿಗೆ ಕರ ಪತ್ರಗಳನ್ನು ನೀಡಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಸುಪ್ರಿಯಾ ಎಸ್. ಕಿನ್ನಿಗೋಳಿ ನಿರ್ವಹಿಸಿದರು.

LEAVE A REPLY

Please enter your comment!
Please enter your name here