ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಿರಣ್ ಬಾಬು ಸರಕಾರಿ ಆಸ್ಪತ್ರೆ ಕಾರ್ಕಳ ಸಾರ್ವಜನಿಕ ಆರೋಗ್ಯ ಸಂಪರ್ಕ ಅಧಿಕಾರಿ ಇವರು ವಿದ್ಯಾರ್ಥಿಗಳಿಗೆ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ನೀಡಿದರು.
ಆಶಾ ಕಾರ್ಯಕರ್ತೆ ರಾಜೇಶ್ವರಿ ಉಪಸ್ಥಿತರಿದ್ದರು.
ಸಮಾಜಶಾಸ್ತ್ರ ಉಪನ್ಯಾಸಕರಾದ ಪ್ರಭಾತ್ ರಂಜನ್ ಸ್ವಾಗತಿಸಿ, ನಿರೂಪಿಸಿದರು ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ವಂದಿಸಿದರು. ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ ಹಾಗೂ ಅಧ್ಯಾಪಕ , ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.