Friday, January 17, 2025
Homeಉಡುಪಿಕ್ರೀಡೆಯಿಂದ ಆರೋಗ್ಯ ವೃದ್ಧಿ: ಇನ್ಸ್ಪೆಕ್ಟರ್ ಮಂಜಪ್ಪ ಡಿ ಆರ್

ಕ್ರೀಡೆಯಿಂದ ಆರೋಗ್ಯ ವೃದ್ಧಿ: ಇನ್ಸ್ಪೆಕ್ಟರ್ ಮಂಜಪ್ಪ ಡಿ ಆರ್

ಕಾಂತಾವರ : ನ 30 ರಂದು ಪ್ರಕೃತಿ ಸಮೂಹ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜಪ್ಪ ಡಿ ಆರ್ ಅವರು ಕ್ರೀಡೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗೌರವ ಅತಿಥಿಗಳಾಗಿ ಸಾಣೂರು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಕರುಣಾಕರ ಕೋಟ್ಯಾನ್ ರವರು ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ಚಾಲ್ಸ್ ಕ್ರಾಸ್ತ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ಕುರಿತು ತಿಳಿಸಿದರು. ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಗೌಡ ಅವರು ಮಾತನಾಡಿ ಆಟೋಟಗಳಿಂದಾಗುವ ಲಾಭಗಳ ಕುರಿತು ಮನ ಮುಟ್ಟುವಂತೆ ತಿಳಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಮಧುಸೂದನ್ ಶಿಂಧೆ ಹಾಗೂ ಸಂಸ್ಥೆಯ ಮೇಲ್ವಿಚಾರಕರಾದ ಶ್ರೀ ಹರೀಶ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಪೂರ್ವಾಭಿಮುಖವಾಗಿ ನಡೆದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ಅತಿಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಶಿಕ್ಷಕಿ ರೌನಕ್ ಆರಾ ಸ್ವಾಗತಿಸಿದರು, ಶಿಕ್ಷಕಿ ಮಮತಾ ವಂದಿಸಿದರು, ಹಾಗೂ ಶಿಕ್ಷಕಿ ಸೌಮ್ಯ ವೈ ಎಸ್ ಅವರು ಕಾರ್ಯಕ್ರಮನ್ನು ನಿರೂಪಿಸಿದರು.

RELATED ARTICLES
- Advertisment -
Google search engine

Most Popular