ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪ್ರಗತಿ -ಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಹಾಗೂ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇವರ ಸಹಯೋಗದೊಂದಿಗೆ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಜರಗಿತು .
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಯುತ,ಜಯರಾಮ ಪೂಜಾರಿ ನಿವೃತ್ತ ಆರೋಗ್ಯ ಮೇಲ್ವಿಚಾರಕರು ಮಕ್ಕಳಲ್ಲಿ ಶಿಸ್ತು, ದುಶ್ಚಟದಿಂದಾಗುವ ದುಷ್ಪರಿಣಾಮ ,ಹಿರಿಯರಿಗೆ ತಂದೆ -ತಾಯಿ, ಗುರುಗಳಿಗೆ ಕೊಡುವ ಗೌರವ, ಸಂಸ್ಕೃತಿ ಸಂಸ್ಕಾರ , ಉತ್ತಮ ಆಚಾರ ವಿಚಾರಗಳ ಅಳವಡಿಕೆ ಬಗ್ಗೆ, ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಶ್ರೀಯುತ ಸುಬ್ರಮಣ್ಯ ಭಟ್ ವಿ , ಕಳ್ಳಿಗೆ ಒಕ್ಕೂಟದ ಅಧ್ಯಕ್ಷರಾದ ಜಯಂತ, ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ, ಶ್ರೀಮತಿ ಅನಿತಾ ಉಪಸ್ಥಿತರಿದ್ದರು .
ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮದ ಪ್ರಸ್ತಾವಿಕ ಮಾಡಿ,ಕಾಲೇಜಿನ ದೈಹಿಕ ಶಿಕ್ಷಣದ ನಿರ್ದೇಶಕರಾದ ಸಾಯಿ ರಾಮ್ ನಾಯ್ಕ್ ರವರು ಸ್ವಾಗತಿಸಿ, ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀಯುತ ಆನಂದ ವಂದಿಸಿದರು .

