ಸಮತೋಲಿತ ಆಹಾರ ಹಾಗೂ ಉತ್ತಮ ಹವ್ಯಾಸಗಳಿಂದ ಆರೋಗ್ಯಕರ ಜೀವನ : ಡಾ. ಅನುರಾಧ ಕೆ ಸಿ

0
5

ಮೂಡಬಿದಿರೆ : ಎಸ್ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ “ಪೋಷಣೆಯ ಮಹತ್ವ ಮತ್ತು ಆರೋಗ್ಯಕರ ಜೀವನಶೈಲಿ” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ನೊರೋನ ತರೀನಾ ರೀಟಾ ವಹಿಸಿದ್ದರು. ಯೂತ್ ರೆಡ್ ಕ್ರಾಸ್ ಅಧಿಕಾರಿ ರಶ್ಮಿ ಎಚ್ ಶೆಟ್ಟಿಗಾರ್ ಕಾರ್ಯಕ್ರಮವನ್ನು ಸಂಯೋಜಿಸಿದರು.


ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಅನುರಾಧಾ ಕೆ.ಸಿ. (B.A.M.S., M.D. ಆಯುರ್ವೇದ) ಭಾಗವಹಿಸಿ, ಸಮತೋಲನ ಆಹಾರ, ನಿಯಮಿತ ವ್ಯಾಯಾಮ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಇಂದಿನ ವೇಗದ ಜೀವನದಲ್ಲಿ ಸರಿಯಾದ ಆಹಾರ ಪದ್ಧತಿ ಹಾಗೂ ಆರೋಗ್ಯದ ಕಾಳಜಿಯ ಮಹತ್ವವನ್ನು ತಿಳಿಸಿದರು .
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ, ಆರೋಗ್ಯಕರ ಜೀವನ ನಡೆಸಲು ಅಗತ್ಯವಾದ ಸಲಹೆಗಳನ್ನು ನೀಡಿದರು.
ಸ್ವಯಂ ಸೇವಕಿ ಮಿನಲ್ ಅತಿಥಿಗಳ ಪರಿಚಯದೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ರಿಷಬ್ ವಂದನಾರ್ಪಣೆ ಸಲ್ಲಿಸಿದರು. ರಕ್ಷಾ ಸಂಪೂರ್ಣ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here