ಚಾಮರಾಜನಗರ: ಚಾಮರಾಜನಗರದಲ್ಲಿ ದಾರುಣ ಘಟನೆ ನಡೆದಿದ್ದು, ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ.
ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಏಕಾಏಕಿ ಕುಸಿದುಬಿದ್ದಿದ್ದಳು. ಕೂಡಲೇ ತೇಜಸ್ವಿನಿಯನ್ನು ಶಾಲಾ ಸಿಬ್ಬಂದಿ ಜೆಎಸ್ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ತೇಜಸ್ವಿನಿ ಮೃತಪಟ್ಟಿದ್ದಳು. ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ವಯಸ್ಕರು ಬಲಿಯಾಗುತ್ತಿದ್ದರು. ಆದರೆ ಇದೀಗ ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.