ಹಾಸನ, ಜೂನ್ 28: ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲಿಗೆ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.