ಹೃದಯ ಆರೋಗ್ಯ ಜಾಗೃತಿ ಶಿಬಿರ

0
7

ಮಂಗಳೂರು : ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಒಮೇಗ ಆಸ್ಪತ್ರೆಯ ವತಿಯಿಂದ ಸೆ.29ರಂದು ಹೃದಯ ಆರೋಗ್ಯ ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರವು ಸೆ.29ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಹೃದಯದ ಆರೋಗ್ಯದ ಕುರಿತು ಅರಿವು ಮೂಡಿಸುವುದರ ಜತೆಗೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಗುವುದು.

ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಇಸಿಜಿ, ಹೃದಯದ ಸ್ಕ್ಯಾನಿಂಗ್ ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುತ್ತದೆ. ಹೃದ್ರೋಗ ತಜ್ಞರಿಂದ ತಪಾಸಣೆ ಹಾಗೂ ಆರೋಗ್ಯ ಸಲಹೆಯ ಸೌಲಭ್ಯವೂ ಇರಲಿದೆ.

ಒಮೇಗ ಆಸ್ಪತ್ರೆಯ ನಿರ್ದೇಶಕ ಹಾಗೂ ಮುಖ್ಯ ಹೃದ್ರೋಗ ತಜ್ಞ ಡಾ. ಕೆ. ಮುಕುಂದ್ ಅವರ ನೇತೃತ್ವದಲ್ಲಿ ಶಿಬಿರ ನಡೆಯಲಿದೆ. ವೈದ್ಯರಾದ ಡಾ. ಯಾಜ್ಞಿಕ್ ಮುಕುಂದ್, ಹೃದ್ರೋಗ ತಜ್ಞ ಹಾಗೂ ಎಲೆಕ್ಟ್ರೋಫಿಸಿಯಾಲಜಿಸ್ಟ್, ಡಾ. ಮೇಘನ ಮುಕುಂದ್, ಡಾ. ವಿನಾಯಕ್ ಹಾಗೂ ಡಾ. ಅಭಿಜಿತ್ ಪಾಟೀಲ್ ಅವರು ಶಿಬಿರಾರ್ಥಿಗಳ ತಪಾಸಣೆ ನಡೆಸಲಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ನಿಯಮಿತ ಆರೋಗ್ಯ ತಪಾಸಣೆ ಅಗತ್ಯವಾಗಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಶಿಬಿರದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿಕೊಳ್ಳಲು ನಾಗರಾಜ್ ಟಿ. – 90355 39262 ಅಥವಾ ಇಬ್ರಾಹಿಂ ಪಿ.ಕೆ. – 98442 43313 ಸಂಪರ್ಕಿಸಬಹುದು. ಶಿಬಿರಕ್ಕೆ ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗಿದೆ