ಕೊಪ್ಪಳದಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು,. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬೆನಕಲ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳಾದ ರಮೇಶ (4) ಮತ್ತು ಜಾನು (2) ಹತ್ಯೆಗೃದು ತಾಯಿ ಲಕ್ಷ್ಮವ್ವ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಮಹಿಳೆಯ ಕೈ ಬಳೆಯಲ್ಲಿ ಚೀಟಿಯೊಂದು ಪತ್ತೆಯಾಗಿದ್ದು, ಸಾವಿಗೆ ಕಾರಣ ಬರೆದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

