ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತದ ಭೀತಿ ಉಂಟಾಗಿದ್ದು, ಈ ಹಿನ್ನಲೆ ಕರ್ನಾಟಕದ ಕರಾವಳಿ ಸೇರಿದಂತೆ ಮಹಾರಾಷ್ಟ್ರದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.