Thursday, July 25, 2024
Homeರಾಜ್ಯತುಳುನಾಡಿನಲ್ಲಿ ಮತ್ತೆ ರೆಡ್‌ ಅಲರ್ಟ್‌ ಜಾರಿ : ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಮುನ್ಸೂಚನೆ

ತುಳುನಾಡಿನಲ್ಲಿ ಮತ್ತೆ ರೆಡ್‌ ಅಲರ್ಟ್‌ ಜಾರಿ : ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ತುಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ಲಭ್ಯವಾಗಿದೆ. ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿದಿದ್ದರೂ, ಈಗ ಇನ್ನೂ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತುಳುನಾಡಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಸುರಿಯಲಿದೆ.
ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 210.5 ಮಿ.ಮೀ. ಮಳೆ ಬಿದ್ದಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

RELATED ARTICLES
- Advertisment -
Google search engine

Most Popular