ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ:ಆರೆಂಜ್‌ ಅಲರ್ಟ್ ಘೋಷಣೆ

0
564


ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ತಡರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ.‌
ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಪುತ್ತೂರು ತಾಲ್ಲೂಕುಗಳ‌ ಅನೇಕ ಕಡೆಗಳಲ್ಲಿ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 21 ರಂದು ರೆಡ್ ಅಲರ್ಟ್, ಮೇ 22, 23ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.‌
ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ದೋಣಿಗಳು ದಡ ಸೇರುವಂತೆ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸೂಚನೆ ನೀಡಿದೆ.

ಪ್ರವಾಸಿಗರು, ಸಾರ್ವಜನಿಕರು ನದಿ‌, ಸಮುದ್ರ ತೀರಕ್ಕೆ ತೆರಳಬಾರದು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here