ಉಡುಪಿ : ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169ಎಯ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ ಈ ಘಾಟಿಯ ಮೂಲಕ ಸೆ. 30ರ ವರೆಗೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶಿಸಿದ್ದಾರೆ.
ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು ತೀರ್ಥಹಳ್ಳಿ-ನಗರ-ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಸಂಚರಿಸಬೇಕು.
ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಸಾಗುವ ಘನ ವಾಹನಗಳು ಬಾಳೆಹೊನ್ನೂರು- ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಾಗಬೇಕು.
ನರಸಿಂಹರಾಜಪುರದಿಂದ ಉಡುಪಿಯತ್ತ ಬರುವ ವಾಹನಗಳು ಕೊಪ್ಪ – ಜಯಪುರ – ಬಾಳೆಹೊಳೆ- ಕಳಸ – ಕುದುರೆಮುಖ – ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

