
ಹೆಬ್ರಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ 7 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು 27.08.2025 ನೇ ಬುಧವಾರದಂದು ಹುತ್ತುರ್ಕೆ ಅಂಗನವಾಡಿ ವಠಾರದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಯಕ್ಷ ಪ್ರಸಂಗಕರ್ತ ಪಿ.ವಿ.ಆನಂದ ಸಾಲಿಗ್ರಾಮ ಮಾತನಾಡಿ ಹಬ್ಬಗಳ ಆಚರಣೆಯ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸಬೇಕು,ಯುವ ಜನತೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೆ ನಮ್ಮ ಹಬ್ಬಗಳ ವೈಜ್ಞಾನಿಕ ಅಂಶಗಳನ್ನು ತಿಳಿದುಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ನಂಬಿಕೆಗಳು ಆತ್ಮ ವಿಶ್ವಾಸವನ್ನು ಹೆಚ್ಚಿಸುವಂತೆ ಇರಬೇಕೆ ಹೊರತು ಮೂಢನಂಬಿಕೆಯತ್ತ ಹೊರಳಬಾರದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಣೇಶೋತ್ಸವ ಸಮಿತಿ ಹುತ್ತುರ್ಕೆ ಇದರ ಅಧ್ಯಕ್ಷರಾದ ಎಚ್.ದಿನೇಶ್ ಶೆಟ್ಟಿ ಮಾತನಾಡಿ 7 ವರ್ಷದ ಹಿಂದೆ ಪ್ರಾರಂಭಗೊಂಡ ಹುತ್ತುರ್ಕೆ ಗಣೇಶೋತ್ಸವವು ವರ್ಷದಿಂದ ವರ್ಷಕ್ಕೆ ಯಶಸ್ವಿಯಾಗಿ ಸಾಗಿ ಬರುತ್ತಿದ್ದು ಇದಕ್ಕೆ ಸಮಿತಿಯ ಎಲ್ಲಾ ಸದಸ್ಯರು ಹಾಗೂ ತನು ಮನ ಧನ ಸಹಕಾರ ನೀಡಿದ ಗ್ರಾಮಸ್ಥರು ಹಾಗೂ ಭಕ್ತಾಧಿಗಳಿಂದ ಇದು ಸಾಧ್ಯವಾಗಿದೆ, ಅಲ್ಲದೆ ಶೈಕ್ಷಣಿಕವಾಗಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಿದ್ದೇವೆ, ಮುಂದಿನ ದಿನಗಳಲ್ಲಿ ಗ್ರಾಮದ ಇನ್ನೂ
ಹೆಚ್ಚಿನ ಮಕ್ಕಳು ಶೈಕ್ಷಣಿಕ ಸಾಧನೆ ಮಾಡಿ ಗೌರವ ಸ್ವೀಕರಿಸುವಂತಾಗಲಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉದ್ಯಮಿಗಳು ಹಾಗೂ ಸಮಿತಿಯ ಗೌರವಧ್ಯಕ್ಷರಾದ ಲಕ್ಷ್ಮಣ್ ಭಟ್, ಚಾರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕೃಷ್ಣ ನಾಯ್ಕ್, ಪ್ರಥಮದರ್ಜೆ ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರ ವಾದಿರಾಜ ಶೆಟ್ಟಿ, ಬ್ಯಾಂಕ್ ಉದ್ಯೋಗಿ ಪ್ರಕಾಶ್ ಶೆಟ್ಟಿ, ಸಮಿತಿಯ ಗೌರವಾಧ್ಯಕ್ಷ ಸುರೇಶ್ ಪೂಜಾರಿ, ಸಮಿತಿಯ ಗೌರವ ಸಲಹೆಗಾರ ಜಗದೀಶ್ ಶೆಟ್ಟಿ, ಅರ್ಚಕರಾದ ಸುಬ್ರಮಣ್ಯ ಹೇರಳೆ, ನಿವೃತ್ತ ಅಧ್ಯಾಪಕ ಮಹಾಬಲ ನಾಯ್ಕ್,ಉದ್ಯಮಿ ಸಂತೋಷ್ ಶೆಟ್ಟಿ, ಸಮಿತಿಯ ಮಹಿಳಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಸಂದೇಶ್ ಕುಲಾಲ್ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.