Friday, February 14, 2025
Homeಕಾರ್ಕಳಹೆಬ್ರಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

ಹೆಬ್ರಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ

ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಹೆಬ್ರಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟವನ್ನು ವರಂಗ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ ನಾಯ್ಕ್‌ ಉದ್ಘಾಟಿಸಿದರು.

ಪಡುಕುಡೂರು : ಹೆಬ್ರಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ.
ಪಡುಕುಡೂರು : ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಹೆಬ್ರಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟ ನಡೆಯಿತು. ಸ್ವಾತಂತ್ರ್ಯಹೋರಾಟಗಾರ ಶ್ರೀ ಎಂ.ಡಿ.ಅಧಿಕಾರಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪಂದ್ಯಾಟಕ್ಕೆ ಚಾಲನೆ ದೊರೆಯಿತು. ವರಂಗ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ ನಾಯ್ಕ್‌ ಕಾರ್ಯಕ್ರ ಉದ್ಘಾಟಿಸಿದರು. ಹಿರಿಯರಾದ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಮಂಡಾಡಿಜಡ್ಡು ಭಾಸ್ಕರ ಶೆಟ್ಟಿ ಪಡುಕುಡೂರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಹೆಬ್ರಿ ವೃತ್ತದ ಬಾಲಕ ಬಾಲಕಿಯರ ೧೦ ತಂಡಗಳು ಭಾಗವಹಿಸಿದ್ದವು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವರಂಗ ಗ್ರಾಮ ಪಂಚಾಯಿತಿ ಸದಸ್ಯೆ ತಾರಾವತಿ ಜ್ಯೋತಿ ಪ್ರಸಾದ್‌ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ಜನಾರ್ಧನ ಬೆಳಿರಾಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ಭಂಡಾರಿ, ಧರ್ಮಸ್ಥಳ ಯೋಜನೆಯ ಒಕ್ಕೂಟದ ಅಧ್ಯಕ್ಷ ಹೃದಯ ಕುಮಾರ್‌ ಶೆಟ್ಟಿ, ಸೇವಾ ಪ್ರತಿನಿಧಿ ಚಿತ್ರಾ, ಶೌರ್ಯ ಘಟಕದ ಅಧ್ಯಕ್ಷ ಶಂಕರ ಶೆಟ್ಟಿ, ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪತ್ರಕರ್ತ ಸುಕುಮಾರ್‌ ಮುನಿಯಾಲ್‌, ಪಡುಕುಡೂರು ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಭಾರವಿ ಹೆಗ್ಡೆ, ಕಾರ್ಯದರ್ಶಿ ಶ್ರೀನಿವಾಸ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ರಕ್ಷಣ್‌ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹರೀಶ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್‌, ಶಿಕ್ಷಕರು, ಸಮಿತಿಯ ಸದಸ್ಯರು, ಗಣ್ಯರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಹರೀಶ ಪೂಜಾರಿ ಎಸ್‌ ಸ್ವಾಗತಿಸಿ ಶಾಲಿನಿ ಸುಕುಮಾರ್‌ ನಿರೂಪಿಸಿ ಶೋಭಾ ವಂದಿಸಿದರು.
……….
ಸ್ವಾತಂತ್ರ್ಯಹೋರಾಟಗಾರ ಶ್ರೀ ಎಂ.ಡಿ.ಅಧಿಕಾರಿ ಅವರ ಪುತ್ಥಳಿಗೆ ಮಾಲಾರ್ಪಣೆ.
ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಹೆಬ್ರಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್‌ ಪಂದ್ಯಾಟದ ಶುಭಚಾಲನೆಯ ಮೊದಲು ಸ್ವಾತಂತ್ರ್ಯಹೋರಾಟಗಾರ ಶ್ರೀ ಎಂ.ಡಿ.ಅಧಿಕಾರಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

RELATED ARTICLES
- Advertisment -
Google search engine

Most Popular