ಹೆಬ್ರಿ: ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ “ದೈನಂದಿನ ಜೀವನದಲ್ಲಿ ವಿಜ್ಞಾನ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 09/07/2026 ಗುರುವಾರ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ, ಮಂಗಳೂರಿನ ಸರ್ಕಾರಿ ಶಿಕ್ಷಕರ ತರಬೇತಿ ಕಾಲೇಜಿನ ನಿವೃತ್ತ ರೀಡರ್ ಶ್ರೀ. ದಿವಾಕರ ಶೆಟ್ಟಿ ಎಚ್ ಅವರು, “ವಿಜ್ಞಾನವೇ ಜೀವನಕ್ಕೆ ಬೆಳಕು. ನಮ್ಮ ದೈನಂದಿನ ಜೀವನದ ಪ್ರತಿಯೊಂದು ಚಟುವಟಿಕೆಯಲ್ಲೂ ವಿಜ್ಞಾನ ಅಡಗಿದೆ. ಭಾರತೀಯ ವಿಜ್ಞಾನವು ವೇದ, ಉಪನಿಷತ್ತು ಮತ್ತು ನಮ್ಮ ಪವಿತ್ರ ಗ್ರಂಥಗಳೊಂದಿಗೆ ಅವಿನಾಭಾವವಾಗಿ ಬೆಸೆದುಕೊಂಡಿದೆ. ಪ್ರಾಚೀನ ಭಾರತದಲ್ಲಿ ಗಣಿತ, ಖಗೋಳ, ವೈದ್ಯಕೀಯ ಮತ್ತು ರಸಾಯನಶಾಸ್ತ್ರದಲ್ಲಿ ನಾವು ಜಗತ್ತಿಗೆ ದಾರಿ ತೋರಿಸಿದ್ದೇವೆ. ವಿದ್ಯಾರ್ಥಿಗಳು ವಿಜ್ಞಾನವನ್ನು ಪಠ್ಯಕ್ಕೆ ಮಾತ್ರ ಸೀಮಿತಗೊಳಿಸದೆ, ನಮ್ಮ ಸಂಸ್ಕೃತಿ ಮತ್ತು ಜೀವನದೊಂದಿಗೆ ಬೆಸೆದುಕೊಳ್ಳಬೇಕು” ಎಂದು ಕರೆ ನೀಡಿದರು.
“Science – The Light That Illuminates Life” ಎಂಬ ಧ್ಯೇಯವಾಕ್ಯದಡಿ ನಡೆದ ಈ ಕಾರ್ಯಕ್ರಮದಲ್ಲಿ ದೈನಂದಿನ ಉಪಕರಣಗಳಿಂದ ಹಿಡಿದು ಆಧುನಿಕ ತಂತ್ರಜ್ಞಾನದವರೆಗೆ ವಿಜ್ಞಾನದ ಪಾತ್ರವನ್ನು ಸರಳವಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಜೋಗಿ, ನಿವೃತ್ತ ದೈಹಿಕ ನಿರ್ದೇಶಕರಾದ ಶ್ರೀ ಸೀತನದಿ ವಿಠ್ಠಲ್ ಶೆಟ್ಟಿ ಹಾಗೂ ವಿಜ್ಞಾನ ಸಂಘದ ಸಂಯೋಜಕರಾದ ಡಾ. ಸುದರ್ಶನ್ ಶೆಟ್ಟಿ ಉಪಸ್ಥಿತರಿದ್ದರು
ಕಾರ್ಯಕ್ರಮದ ಆರಂಭದಲ್ಲಿ ಕು. ರಕ್ಷಿತಾ ಪ್ರಾರ್ಥನಾ ಗೀತೆ ಹಾಡಿದರು. ಕು. ಸಾತ್ವಿಕ್ ದೇವಾಡಿಗ ಅತಿಥಿಗಳನ್ನು ಸ್ವಾಗತಿಸಿದರು. ಕು. ಅಕ್ಷಯ್ ಅಶೋಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಕು. ಸುಚಿತ್ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

