ಬೆಳ್ತಂಗಡಿ : ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿ ವತಿಯಿಂದ ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ನೀಡಿ ಗೌರವಿಸಲ್ಪಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ತಾಲೂಕಿನ ಸಮಸ್ತ ಹೆಗ್ಗಡೆ ಸಮಾಜದ ಬಂಧುಗಳು ಆತ್ಮೀಯವಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಹಾಗೂ ಸದಸ್ಯರು ಶಾಸಕ ಹರೀಶ್ ಪೂಂಜ ಅವರಿಗೆ ಪುಷ್ಪಗುಚ್ಛ ನೀಡಿ ಸನ್ಮಾನಿಸಿ, ಸಾರ್ವಜನಿಕ ಸೇವೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಅವರು ಸಲ್ಲಿಸುತ್ತಿರುವ ಸೇವೆಯನ್ನು ಶ್ಲಾಘಿಸಿದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಜನಪರ ಕಾರ್ಯಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಗೌರವ ಲಭಿಸಿರುವುದು ಸಂತಸದ ವಿಷಯ ಎಂದು ಅಭಿಪ್ರಾಯಪಟ್ಟರು.
ಅಭಿನಂದನೆ ಸ್ವೀಕರಿಸಿದ ಶಾಸಕ ಹರೀಶ್ ಪೂಂಜ, ಈ ಗೌರವ ತಮ್ಮೊಬ್ಬರದ್ದಲ್ಲ, ಕ್ಷೇತ್ರದ ಪ್ರತಿಯೊಬ್ಬ ನಾಗರಿಕರ ಪ್ರೀತಿ, ವಿಶ್ವಾಸ ಹಾಗೂ ಸಹಕಾರದ ಫಲವಾಗಿದೆ ಎಂದು ತಿಳಿಸಿದರು. ಮುಂದೆಯೂ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಗೆ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಗ್ಗಡೆ ಸಮಾಜದ ಪ್ರಮುಖರು, ಹಿರಿಯರು, ಯುವ ಮುಖಂಡರು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದು, ಶಾಸಕರಿಗೆ ಶುಭ ಹಾರೈಸಿದರು.

