ಹೆಜಮಾಡಿ: ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ

0
128

ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಕಾಪು ತಾಲ್ಲೂಕು ಪಂಚಾಯಿತ್ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್ 17 ರಂದು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದ ಮೈದಾನದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಎ. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ಕಾಪು ತಾಲೂಕು ಗ್ಯಾರಂಟಿ ಸಮಿತಿ ಅನುಷ್ಠಾನದ ಅಧ್ಯಕ್ಷರಾದ ನವೀನ್ ಚಂದ್ರ ಎಸ್. ಸುವರ್ಣ ಅವರು ಉದ್ಘಾಟಿಸಿ ಕ್ರೀಡಾಳುಗಳಿಗೆ ಹಿತನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯನ್ನು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕ ನಿಯಮಿತ ನಿರ್ದೇಶಕರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ತಾಲೂಕು ಯುವ ಜನಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ ಸೂಡಾ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ ,ರಾಷ್ಟ್ರೀಯ ಕ್ರೀಡಾಪಟು ಹೆಜಮಾಡಿ ಪ್ರಕಾಶ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ರಾಜ್ಯ ಪರಿಷತ್ ಸದಸ್ಯರಾದ ಅಬ್ದುಲ್ ರಜಾಕ್ ಬೆಳಪು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 800ಕ್ಕೂ ಹೆಚ್ಚು ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು.

ಹೆಜಮಾಡಿ ನಾರಾಯಣ ಗುರು ಬಿಲ್ಲವ ಸಂಘದ ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಊಟೋಪಚಾರದ ಮುಖೇನ ಸಂಪೂರ್ಣ ಸಹಕಾರ ನೀಡಿದರು ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ರವರಿಂದ ಎಲ್ಲಾ ಕ್ರೀಡಾಪಟುಗಳಿಗೆ ಮಜ್ಜಿಗೆ ವಿತರಣೆಯನ್ನು ಮಾಡಿದರು. ಈ ಕಾರ್ಯಕ್ರಮದ ಧನ್ಯವಾದ ವಾದವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ನವೀನ್ ಶೆಟ್ಟಿ ಇನ್ನಂಜೆ ಹಾಗೂ ಕಾರ್ಯಕ್ರಮದ ನಿರ್ವಹಣೆಯನ್ನು ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ್ ಶೆಟ್ಟಿ ತೆಕ್ಕಟ್ಟೆ ನಿರ್ವಹಿಸಿದರು.

LEAVE A REPLY

Please enter your comment!
Please enter your name here