Saturday, July 20, 2024
Homeಅಪರಾಧಮಂಗಳೂರು: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ; ಸಂತ್ರಸ್ತರು, ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಮಂಗಳೂರು: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ; ಸಂತ್ರಸ್ತರು, ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಮಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ, ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.

ತನಿಖೆಯ ಸಂದರ್ಭ ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದುಬಂದಿದೆ. ಸಂತ್ರಸ್ತರು, ಮಾಹಿತಿದಾರರಿಗೆ ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದೆ.

ಸಂತ್ರಸ್ತರು ಅಥವಾ ಮಾಹಿತಿದಾರರು 6360938947 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು. ಸಂತ್ರಸ್ತರು ಅಥವಾ ಮಾಹಿತಿದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

RELATED ARTICLES
- Advertisment -
Google search engine

Most Popular