ಮೈಸೂರು, ಬೆಂಗಳೂರು, ಶಿವಮೊಗ್ಗದಲ್ಲಿ ಕಂಬಳಕ್ಕೆ ಗ್ರಿನ್‌ಸಿಗ್ನಲ್ ನೀಡಿದ ಹೈಕೋರ್ಟ್

0
34

ಮೂಡುಬಿದಿರೆ: ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ಆಯೋಜನೆ ಕುರಿತು ವಿಚಾರ ನ್ಯಾಯಾಲಯದಲ್ಲಿದ್ದು, ಇದೀಗ ಈ ಮೂರು ಕಡೆ ಕಂಬಳ ನಡೆಸಲು ಹೈಕೋರ್ಟ್ ಗ್ರಿನ್‌ಸಿಗ್ನಲ್ ನೀಡಿದೆ. ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ.

ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಜಿಲ್ಲಾ ಕಂಬಳ ಸಮಿತಿ ಹಾಗೂ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಬೆಳಪು ಡಾ.ದೇವಿ ಪ್ರಸಾದ್ ಶೆಟ್ಟಿ ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ ಕ್ಷೇತ್ರದಲ್ಲಿ ಸಂತಸದ ಕ್ಷಣ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ವಾದಿಸಿದ್ದರು. ಕರ್ನಾಟಕ ಸರ್ಕಾರ ಅಡ್ಡಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ ವಿನೋದ್ ಕುಮಾರ್ ಮದೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು. ಪ್ರವಾಸೋದ್ಯಮಕ್ಕೆ ಇದು ಉತ್ತೇಜನ ನೀಡುತ್ತದೆ. ಸರ್ಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ, ಈ ಮೂಲಕ ಸರ್ಕಾರ ಅಧೀನದ ರಾಜ್ಯ ಕಂಬಳ ಅಸೋಸಿಯೇಷನ್ ಮೊದಲ ಜಯ ಸಿಕ್ಕಂತಾಗಿದೆ ಜಿಲ್ಲಾ ಕಂಬಳ ಸಮಿತಿ ಹಾಗೂ ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಎಂದು ಮಾಹಿತಿ ನೀಡಿದರು.

ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಸಿಯೇಶನ್, ಜಿಲ್ಲಾ ಸಮಿತಿಗೆ ಸಂದ ಜಯ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here