ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ; ಹಲವು ಷರತ್ತು ವಿಧಿಸಿ ಆದೇಶ

0
214

ಬೆಂಗಳೂರು: ಹಲವು ಗೊಂದಲಗಳಿಗೆ ಕಾರಣವಾಗಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ, ಎರಡು ದಿನ ವಾದ ಪ್ರತಿವಾದ ಆಲಿಸಿದ್ದು, ಅಂತಿಮವಾಗಿ ಇಂದು (ಸೆಪ್ಟೆಂಬರ್ 25) ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದ್ರೆ,  ಜನರ ದತ್ತಾಂಶದ ಗೌಪ್ಯತೆ ಬಗ್ಗೆ ಸರ್ಕಾರಕ್ಕೆ ಹಾಗೂ ಹಿಂದೂಳಿದ ವರ್ಗಾಗಳ ಆಯೋಗಕ್ಕೆ ಕೆಲವು ಮಹತ್ವದ ಷರತ್ತುಗಳನ್ನು ವಿಧಿಸಿದೆ.

ಕೋರ್ಟ್ ವಿಧಿಸಿದ ಷರತ್ತುಗಳೇನು?

ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತುಗಳನ್ನು ವಿಧಿಸಿದೆ.

LEAVE A REPLY

Please enter your comment!
Please enter your name here