ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು

0
13

• ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು.

• ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು.

• ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

• ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯವನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚನೆ.

• ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಫಲಿತಾಂಶ ಸುಧಾರಣೆ:

• ಈ ಬಾರಿ ಎಸ್ಎಸ್ಎಲ್ಸಿಯಲ್ಲಿ ಶೇ. 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.14.06 ಹೆಚ್ಚಾಗಿದೆ. ಪಿಯುಸಿಯಲ್ಲಿ ಈ ಬಾರಿ ಶೇ.86.48ರಷ್ಟು ಹೆಚ್ಚಳವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 13 ಹೆಚ್ಚಳವಾಗಿದೆ.

• ಎಸ್ಎಸ್ಎಲ್ಸಿಯಲ್ಲಿ ಈ ವರ್ಷ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2393 ಇದ್ದು ಕಳೆದ ವರ್ಷ 766 ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದವು.

• ಈ ಬಾರಿ ಎಸ್ಎಸ್ಎಲ್ಸಿಯಲ್ಲಿ ಎಸ್ ಮತ್ತು ಎಸ್ಟಿ ವಿದ್ಯಾರ್ಥಿಗಳ ಫಲಿತಾಂಶ ಶೇ.18 ರಷ್ಟು ಹೆಚ್ಚಳವಾಗಿದೆ. ಇದೇ ರೀತಿ ಎಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶ ಗಣನೀಯವಾಗಿ ಸುಧಾರಣೆಯಾಗಿದೆ. ಕೆಟಗರಿ-1 ಶೇ.16.6, 2ಎ-ಶೇ. 11.5, 2 ಬಿ- ಶೇ.18, 2ಬಿ-ಶೇ.18, 3ಎ- ಶೇ. 8.12, 3ಬಿ- ಶೇ.10 ಫಲಿತಾಂಶ ಸುಧಾರಣೆಯಾಗಿದೆ.

• 2026ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣ ಪ್ರಮಾಣ ಶೇಕಡ 86.48 . 2025ರಲ್ಲಿ ಶೇಕಡ 73.45 ಉತ್ತೀರ್ಣ ಪ್ರಮಾಣ ಇದ್ದು ಶೇಕಡ 13.03 ಹೆಚ್ಚಳವಾಗಿದೆ .
• ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಉತ್ತಮಗೊಳ್ಳಲು ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು.
.

LEAVE A REPLY

Please enter your comment!
Please enter your name here