ಹಿಂದೂ ಮುಖಂಡ ಮಂಜು ಕೊಳಗೆ ಚೂರಿ ಇರಿತ

0
5

ಮಲ್ಪೆ ಬೀಚಿನಲ್ಲಿ ಘಟನೆ : ಯುವಕನಿಂದ ಚೂರಿ ಇರಿತ

ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಎಂಬವರಿಗೆ ಯುವಕರಿಬ್ಬರು ಮಂಗಳವಾರ ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ತೀವ್ರ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಅವರ ಪತಿಯಾಗಿರುವ ಮಂಜು ಕೊಳ, ಮಲ್ಪೆ ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಪಂಚಾಯಿತಿಗೆ ಕರೆದಿದ್ದರು.

ಈ ಸಂದರ್ಭ ಮಾತಿಗೆ ಮಾತು ಬೆಳೆದಿದ್ದು, ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಗಕ್ಕೆ ಇರಿದ ಪರಿಣಾಮದಿಂದ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಗಾಯಾಳು ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here