ಸುಹಾಸ್‌ ಶೆಟ್ಟಿ ಹತ್ಯೆ: ಹಿಂದೂ ಯುವಕರೂ ಅರೆಸ್ಟ್‌ ..! ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನೂ ಬಳಸಿಕೊಂಡ ಆದಿಲ್

0
972

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್  ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು, ಬಂಧಿತರ ವಿವರ ನೀಡಿದ್ದಾರೆ. ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಆದರೆ, ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್ ಮಾಡಿದ್ದಾಗಿಯೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣನ ಹತ್ಯೆ ಪ್ರತೀಕಾರಕ್ಕೆ ಆದಿಲ್ ಹಿಂದೂಗಳನ್ನೂ ಬಳಸಿಕೊಂಡಿರುವುದು ಬಯಲಾದಂತಾಗಿದೆ.

ಯಾರೆಲ್ಲಾ ಅರೆಸ್ಟ್​?

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್​ ಹೇಳಿರುವಂತೆ ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ. ಅವರ ವಿವರನ್ನು ನೀಡಿದ್ದಾರೆ. ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು.

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದೇನು?

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್​ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಸಫ್ವಾನ್​​ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್​ ತಮ್ಮ ಆದಿಲ್ ಮೆಹರೂಫ್​ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here