ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬುದಕ್ಕೆ ಇಂದು ಸರಕಾರಿ ಪ್ರೌಢಶಾಲೆ ಅಳದಂಗಡಿಯಲ್ಲಿ “ವೃತ್ತಿ ಮಾರ್ಗದರ್ಶನ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಕಳ ಜ್ಞಾನಸುಧಾ ಕಾಲೇಜಿನ ಉಪನ್ಯಾಸಕರಾದ ಸಂದೀಪ್ ಮತ್ತು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಶಿಕ್ಷಕರಾದ ಜಗನ್ನಾಥ್ ಇವರು ಮಾರ್ಗದರ್ಶನ ನೀಡಿದರು.

ಈ ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು ಶಾಲಾ ಮಕ್ಕಳಿಗೆ ಮಾರ್ಗದರ್ಶನಕ್ಕೆ ಪೂರಕವಾಗಿ ಪುಸ್ತಕ ಮತ್ತು ಪೆನ್ನು ನೀಡಿ ಶುಭ ನುಡಿಯನ್ನಾಡಿದರು.

