ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ : ನಗರಸಭೆ ಮಾಜಿ ಉಪಾಧ್ಯಕ್ಷೆ ಮೃತ್ಯು

0
167

ಉಡುಪಿ : ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಬಿಜೆಪಿ ಮುಖಂಡ ಮಂಜುಕೊಳ ಅವರ ಪತ್ನಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಎಂದು ಗುರುತಿಸಲಾಗಿದೆ.

ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಯಿಂದ ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ತನಿಖೆ ಆರಂಭಿಸಿದ್ದಾರೆ.