ದಕ್ಷಿಣ ಕನ್ನಡ — ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಜೊತೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜೂ.12) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಸಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರದಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಅಂಗನವಾಡಿ ಸಹಿತ ಪ್ರೌಢ ಶಾಲೆಯವರೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.