Saturday, July 20, 2024
Homeಉಡುಪಿಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ ( ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಮೊದಲು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿದ್ದಾರೆ .

RELATED ARTICLES
- Advertisment -
Google search engine

Most Popular