Monday, May 19, 2025
Homeಉಡುಪಿಜುಲೈ 19 ರಂದು ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಜುಲೈ 19 ರಂದು ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದ ಕಾರಣ ಶುಕ್ರವಾರ (ಜುಲೈ 19) ರಂದು ಪಿಯುಸಿವರೆಗಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಾದ್ಯಂತ ಗಾಳಿ ಮಳೆ ಬಿಡದೆ ಸುರಿಯುತ್ತಿದೆ.

ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶುಕ್ರವಾರವೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಪುನರ್ವಸು ಮಳೆ ಉತ್ತಮವಾಗಿ ಸುರಿದಿದ್ದು, ನಾಳೆಯಿಂದ ಪುಷ್ಯ ಆರಂಭವಾಗಲಿದ್ದು, ಮಳೆ ಮುಂದುವರಿಯುವ ಸಾಧ್ಯತೆಯಿದೆ

RELATED ARTICLES
- Advertisment -
Google search engine

Most Popular