ಹುಬ್ಬಳ್ಳಿ: ನಗರದ ವ್ಯಾಪಾರಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆಯರು ಸೇರಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೋಯಾ ನದಾಫ್, ಪರ್ವೀನ ಬಳ್ಳಾರಿ, ಸಯ್ಯದ್ ತಹಾಶೀಲ್ದಾರ್, ತೌಸೀಫ್, ಅಬ್ದುಲ್ ಬಂಧಿತರು. ಡಿಸಿಪಿ ಮಹಾನಿಂಗ ನಂದಗಾಂವಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಪಾತ್ರೆ ವ್ಯಾಪಾರಿ ಚಗನ್‌ಲಾಲ್ ಎಂಬವರು ಈ ಗ್ಯಾಂಗ್‌ನಿಂದ ಮೋಸಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಜೋಯಾ ಅವರು ಚಗನ್‌ಲಾಲ್ ಅವರ ಮೊಬೈಲ್‌ಗೆ ಕರೆ ಮಾಡಿ ಪರಿಚಯಿಸಿಕೊಂಡು ಉಣಕಲ್ ಕ್ರಾಸ್‌ಗೆ ಕರೆಸಿಕೊಂಡಿದ್ದಾಳೆ. ನಂತರ ರಾಜನಗರದ ಮನೆಗೆ ಕರೆದುಕೊಂಡು ಹೋಗಿ ಬೆತ್ತಲೆಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾಳೆ. ತದನಂತರ ಐವರು ಸೇರಿ ಕೇಳಿದಷ್ಟು ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಚಗನ್‌ಲಾಲ್‌ರವರು ನೀಡಿರುವ ದೂರಿನ ಆಧಾರದಲ್ಲಿ ಐವರ ಬಂಧನವಾಗಿದೆ.