ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ರಾಜಾಂಗಣದಲ್ಲಿ ಜರಗಿದ ಶ್ರೀ ಕೃಷ್ಣ ಮಾಸೋತ್ಸವದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶಿಮೀಂದ್ರ ತೀರ್ಥರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ .ಹರ್ಷೇಂದ್ರ ಕುಮಾರ್ ಮತ್ತು ಹರ್ಷೇಂದ್ರ ಕುಮಾರ್ ದಂಪತಿಗಳನ್ನು ಶ್ರೀ ‘ಕೃಷ್ಣಾನುಗ್ರಹ’ ಪ್ರಶಸ್ತಿ ನೀಡಿ ಗೌರವಿಸಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಷತ್ರೆ ‘ ಸೌಖ್ಯವನ’ ಪರೀಕದಲ್ಲಿ ಹೊಸತಾಗಿ ನಿರ್ಮಾಣವಾದ ‘ ವದನಕಾಂತಿ ಚಿಕಿತ್ಸಾ’ ವಿಭಾಗವನ್ನು ಡಿ. ಹರ್ಷೇಂದ್ರ ಕುಮಾರ್ ಮತ್ತು ಹರ್ಷೇಂದ್ರ ಕುಮಾರ್ ದಂಪತಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು.