ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್‌ನಲ್ಲಿ ಸಾಧಕ ಸದಸ್ಯರಿಗೆ ಸನ್ಮಾನ

0
143

ಬಂಟ್ವಾಳ ತಾಲ್ಲೂಕಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಾಧಕ ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಮತ್ತು ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಇವರನ್ನು ಗುರುವಾರ ನಡೆದ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು. ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ.ದೇವದಾಸ್ ರೈ, ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್, ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಮಾಜಿ ಅಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್, ಪ್ರಮುಖರಾದ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಅವಿಲ್ ಮಿನೇಜಸ್, ರಾಘವೇಂದ್ರ ಭಟ್, ಶೃತಿ ಮಾಡ್ತಾ, ಆಂಟನಿ ಸಿಕ್ವೇರಾ, ಕೆ.ರಮೇಶ ನಾಯಕ್ ರಾಯಿ, ಪ್ರೀತಂ ರಾಡ್ರಿಗಸ್, ಕಾಲಿನ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here